Breaking News
Home / ಜಿಲ್ಲೆ / ಬಿಜಾಪುರ / ಮಹಾರಾಷ್ಟ್ರದಲ್ಲಿ ಮಳೆ ಆರಂಭ ; ಜೂನ್ ಮೊದಲ ವಾರದಲ್ಲಿಯೇ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ದಾಖಲು

ಮಹಾರಾಷ್ಟ್ರದಲ್ಲಿ ಮಳೆ ಆರಂಭ ; ಜೂನ್ ಮೊದಲ ವಾರದಲ್ಲಿಯೇ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ದಾಖಲು

Spread the love

ವಿಜಯಪುರ(ಜೂ. 06): ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರಕ್ಕೆ ನೀರಿನ ಒಳಹರಿವು ಆರಂಭವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಜೂನ್ ಮೊದಲ ವಾರದಲ್ಲಿ ನೀರಿನ ಒಳಹರಿವು ಆರಂಭವಾಗಿದ್ದು ಗಮನಾರ್ಹವಾಗಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ನಿನ್ನೆಯಿಂದಲೇ ನೀರಿನ ಒಳಹರಿವು ಆರಂಭವಾಗಿದೆ. ನಿನ್ನೆ 12,761 ಕ್ಯೂಸೆಕ್ಸ್ ನೀರಿನ ಒಳಹರಿವು ದಾಖಲಾದರೆ ಇಂದು 14,050 ಕ್ಯೂಸೆಕ್ಸ್ ನೀರಿನ ಹರಿದು ಬರುತ್ತಿದೆ.  51.9.60 ಮೀಟರ್ ಗರಿಷ್ಠ ಎತ್ತರದ ಜಲಾಶಯದಲ್ಲಿ ಈಗ 509.55 ಮೀಟರ್ ವರೆಗೆ ನೀರು ಸಂಗ್ರಹವಾಗಿದೆ. 123.081 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 10.168 ಟಿಎಂಸಿ ನೀರು ಸಂಗ್ರಹವಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಆರಂಭ ; ಜೂನ್ ಮೊದಲ ವಾರದಲ್ಲಿಯೇ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ದಾಖಲು

ಕಳೆದ ವರ್ಷ ಈ ದಿನ ಆಲಮಟ್ಟಿ ಜಲಾಶಯದಲ್ಲಿ 508.31 ಮೀ. ನೀರು ಸಂಗ್ರಹವಾಗಿತ್ತು.  ಅಂದರೆ, 22.577 ಟಿಎಂಸಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 5.211 ಟಿಎಂಸಿ ಹೆಚ್ಚು ನೀರು ಸಂಗ್ರಹವಾಗಿದೆ. ಇನ್ನೂ ಮೂರ್ನಾಲ್ಕು ದಿನ ಒಳಹರಿವು ಮುಂದುವರಿಕೆ ನೀರಿಕ್ಷಿಸಲಾಗಿದೆ. ಆಲಮಟ್ಟಿ ಜಲಾಶಯದ ಉಗಮ ಸ್ಥಾನ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಂದರೆ ಮಹಾರಾಷ್ಟ್ರದಲ್ಲಿ ಈ ಬಾರಿ ಮುಂಗಾರು ಬೇಗನೆ ಆರಂಭವಾಗಿದೆ.

ಪ್ರತಿವರ್ಷ ಆಲಮಟ್ಟಿ ಜಲಾಶಯಕ್ಕೆ ಸರಾಸರಿ ಜೂನ್ 3 ಅಥವಾ 4 ನೇ ವಾರದಲ್ಲಿ ನೀರಿನ ಒಳಹರಿವು ಆರಂಭವಾಗುತ್ತಿತ್ತು. ಆದರೆ, ಈ ಬಾರಿ 2 ರಿಂದ 3 ವಾರ ಮೊದಲೇ ನೀರಿನ ಒಳಹರಿವು ಆರಂಭವಾಗಿದೆ. ಇದರ ಜೊತೆಯಲ್ಲಿಯೇ ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಬ್ಯಾರೇಜಿನಿಂದ 10 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಟ್ಟಿರುವುದೂ ಕೂಡ ಆಲಮಟ್ಟಿ ಜಿಲಾಷಯಕ್ಕೆ ನೀರಿನ ಒಳಹರಿವು ಹೆಚ್ಚಾಗಲು ಕಾರಣವಾಗಿದೆ. ಮಹಾರಾಷ್ಟ್ರ ಮಳೆ ಹೆಚ್ಚಾದರೆ ಮತ್ತಷ್ಟು ನೀರು ಹರಿದು ಬರಲಿದೆ. ಕೃಷ್ಣಾ ಕಣವೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಒಳಹರಿವು ಇನ್ನೂ ಹೆಚ್ಚಾಗಲಿದೆ.

ಇದರ ಜತೆಗೆ ಹಿಪ್ಪರಗಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿ ರುವ ಕಾರಣ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಂದು ಸೇರುವ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ಬಳಿ ಕೃಷ್ಣಾ ನದಿಗೆ ಕಳೆದ ನಾಲ್ಕೈದು ದಿನಗಳಿಂದ ನೀರಿನ ಒಳಹರಿವು ಹೆಚ್ಚಾಗಿದೆ. ಶುಕ್ರವಾರ 4.400 ಕ್ಯೂಸೆಕ್ಸ್​​ ನೀರು ಇತ್ತು ಎಂದು ಕೆಬಿಜೆಎನ್ ಎಲ್ ಮೂಲಗಳು ತಿಳಿಸಿವೆ.

ಕಳೆದ ವರ್ಷ ಆಲಮಟ್ಟಿ ಜಲಾಶಯಕ್ಕೆ ಜುಲೈ 3 ರಿಂದ ಒಳಹರಿವು ಆರಂಭಗೊಂಡಿತ್ತು. ಡಿಸೆಂಬರ್​ನಲ್ಲಿ ಒಳಹರಿವು ಸಂಪೂರ್ಣವಾಗಿ ನಿಂತಿತ್ತು. ಕಳೆದ ವರ್ಷ ಆಲಮಟ್ಟಿ ಲಾಲ್ ಬಹೂದ್ದೂರ ಶಾಸ್ತ್ರಿ ಜಲಾಶಯದ ಇತಿಹಾಸದಲ್ಲಿಯೇ ಅಪಾರ ಪ್ರಮಾಣದ ನೀರು ಹರಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಈ ವರ್ಷ ಅಂದರೆ 2020ರಲ್ಲಿ ಏ.10ರವರೆಗೆ ಕಾಲುವೆಗೆ ನೀರು ಹರಿಸಿದ್ದರೂ ಸಹ ಜಲಾಶಯದಲ್ಲಿ ಇನ್ನೂ 27 ಟಿಎಂಸಿ ನೀರು ಸಂಗ್ರಹವಿದೆ.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ