ಬೆಂಗಳೂರು, ಮಾ.16- ರಾಜ್ಯದಲ್ಲಿ 31ಸಾವಿರ ಮನೆಗಳಿಗೆ 183 ಕೋಟಿ ರೂ.ಗಳು ಬಿಡುಗಡೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಿ.ಎಸ್.ಹೂಲಗೇರಿ ಅವರ ಪರವಾಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರ್ಹ ಫಲಾನುಭವಿಗಳ ಖಾತೆಗೆ ಈ ಹಣವನ್ನು ಬಿಡುಗಡೆ ಮಾಡಲಾಗಿದೆ.
ವಿವಿಧ ವಸತಿ ಯೋಜನೆಯಡಿ ಮನೆ ನಿರ್ಮಾಣದ ಪ್ರಗತಿಯ ಮಾಹಿತಿ ಪಡೆಯುವ ಸಂಬಂಧ ಶಾಸಕರಿಗೆ ಪತ್ರ ಬರೆದು ವಿಧಾನಸಭಾ ಕ್ಷೇತ್ರವಾರು ಮಾಹಿತಿ ಪಡೆಯಲಾಗುವುದು ಎಂದರು. ಅರ್ಹರು ಬಿಟ್ಟು ಹೋಗಿದ್ದರೆ ಅವಕಾಶ ಕಲ್ಪಿಸಲಾಗುವುದು. ಹಣದ ಕೊರತೆಯಿಂದ ಯಾವುದೇ ಮನೆ ನಿರ್ಮಾಣ ವಿಳಂಬವಾಗಿಲ್ಲ.