Breaking News

ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ: ನೀರು ಮಿತವಾಗಿ ಬಳಸಲು ಬೆಳಗಾವಿ ಪಾಲಿಕೆ ಮನವಿ

Spread the love

ಬೆಳಗಾವಿ: ಪ್ರಸ್ತುತ ಮುಂಗಾರು ಮಳೆಯ ಅಭಾವದ ಕಾರಣ, ಬೆಳಗಾವಿ ಮಹಾನಗರಕ್ಕೆ ನೀರು ಸರಬರಾಜು ಮಾಡುವ, ರಕ್ಕಸಕೊಪ್ಪ ಜಲಾಶಯ ಹಾಗೂ ಹಿಡಕಲ್ ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿತವಾಗಿರುತ್ತದೆ. ಮಹಾನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆಯನ್ನು ನಿಭಾಯಿಸಲು ಈ ಕೆಳಗಿನಂತೆ ತುರ್ತು ಕ್ರಮ ತೆಗೆದುಕೊಳ್ಳಲಾಗಿದೆ.

ಪ್ರಸ್ತುತ 24/7 ವಲಯಗಳಿಗೆ ದಿನನಿತ್ಯ 2 ತಾಸಿನವರೆಗೆ ನೀರನ್ನು ಸರಬರಾಜು ಮಾಡಲಾಗುವುದು. 4 ರಿಂದ 5 ದಿನಗಳಿಗೊಮ್ಮೆ 3 ರಿಂದ 4 ತಾಸಿನವರೆಗೆ ನೀರು ಸರಬರಾಜು ಮಾಡುತ್ತಿರುವ ಪ್ರದೇಶಗಳಿಗೆ ನೀರು ಸರಬರಾಜು ಸಮಯವನ್ನು 1 ರಿಂದ 1.5 ತಾಸಿನವೆರೆಗೆ ಇಳಿಸಲಾಗುವುದು. ಹಾಲಿಯಿರುವ 745 ಬೋರ್‌ವೆಲ್‌ ಹಾಗೂ 68 ತೆರೆದ ಬಾವಿಗಳಿಗೆ ಅಳವಡಿಸಿದ ಯಂತ್ರೋಪಕರಣಗಳನ್ನು (ಬಳಕೆಗೆ ಮಾತ್ರ ಉಪಯೋಗಿಸಲು) ಸುಸ್ಥಿತಿಯಲ್ಲಿ ಇಡಲಾಗಿದೆ. ಕುಡಿಯುವ ನೀರನ್ನು ಕುದಿಸಿ, ಆರಿಸಿ ಕುಡಿಯಲು ಹಾಗೂ ಮಿತವಾಗಿ ಬಳಸಲು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ