Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು; ದುರ್ಯೋಧನ ಐಹೋಳೆ

ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು; ದುರ್ಯೋಧನ ಐಹೋಳೆ

Spread the love

ಚಿಕ್ಕೋಡಿ: ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು ರಾಯಬಾಗ ಶಾಸಕ ದುರ್ಯೋಧನ ಐಹೋಳೆ ಹೇಳಿದರು.

ತಾಲೂಕಿನ ಉಮರಾಣಿ ಗ್ರಾಮದಲ್ಲಿ ಶುಕ್ರವಾರ ಕೊರೊನಾ ವೈರಸ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆಸಿದ ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮ ಪಂಚಾಯತಿ ವತಿಯಿಂದ ಮಾಸ್ಕ್ ಮತ್ತು ಸ್ಯಾನಿಟೈಸ್ ಪೂರೈಸುವ ವ್ಯವಸ್ಥೆ ಮಾಡಬೇಕು. ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ಕುರಿತು ಹಳ್ಳೀಯ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ತಮ್ಮ ಜೀವ ಪಣಕ್ಕಿಟ್ಟು ಮತ್ತೊಬ್ಬರ ಜೀವ ಉಳಿಸುವ ನಿಟ್ಟಿನಲ್ಲಿ ಮನೆ ಮನೆಗೆ ಹೋಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಅವರಿಗೆ ಸಹಕಾರ ನೀಡಬೇಕು. ಯುವಕರು ಅನಾವಶ್ಯಕವಾಗಿ ಮನೆಯಿಂದ ಹಒರಗೆ ಬಂದು ರಸ್ತೆಯಲ್ಲಿ ಅಲೆದಾಡುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಸಿಪಿಐ ಆರ್.ಪಾಟೀಲ್ ಮಾತನಾಡಿ, ಸಾರ್ವಜನಿಕರು ಸರಕಾರ ಕೊರೊನಾ ಹಿನ್ನೆಲೆಯಲ್ಲಿ ಹೇರಿರುವ ಲಾಕ್‍ಡೌನ್ ಮನೆಯಲ್ಲಿದ್ದು ಪಾಲಿಸಬೇಕು. ಇಲ್ಲವೆ ಸ್ಮಶಾನಕ್ಕೆ ಹೋಗಬೇಕು ಎಂದು ಕಾರವಾಗಿ ಹೇಳಿದರು.
ತಹಸೀಲ್ದಾರ ಎಸ್.ಎಸ್.ಸಂಪಗಾಂವಿ, ಸಿಡಿಪಿಐ ಗೀತಾ ಕಾಳೆ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಪಾಟೀಲ ಮಾತನಾಡಿದರು.

ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸುರೇಶ ಬೆಲ್ಲದ, ಉಪತಹಸೀಲ್ದಾರ ಸಿ.ಎ.ಪಾಟೀಲ, ಪಿಡಿಓ ಸಂತೋಷ ಕಟ್ಟಿಮನಿ, ಗ್ರಾ.ಪಂ.ಸದಸ್ಯರಾದ ಮುರುಗೆಪ್ಪ ಅಡಿಸೇರಿ, ಧನಪಾಲ ಭೀಮನಾಯಿಕ, ಲಕ್ಷ್ಮಣ ಪೂಜೇರಿ, ವಿರುಪಾಕ್ಷಿ ಕವಟಗಿ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ