Breaking News

ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Spread the love

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಇಂಧನ ಪೂರೈಕೆಯಲ್ಲಿ ಅಡಚಣೆ ಉಂಟಾದರೆ ಭಾರತಕ್ಕೆ  ಕಚ್ಚಾ ತೈಲ ಪೂರೈಸಲು ನಾವು ಸಿದ್ದರಿದ್ದೇವೆ ಎಂದು ರಷ್ಯಾ ಹೇಳಿದೆ.

ಕಚ್ಚಾ ತೈಲಗಳು ಹಾದು ಹೋಗುವ ಹಾರ್ಮುಜ್ ಜಲಸಂಧಿಯನ್ನು  ಇರಾನ್‌ ಬಂದ್‌ ಮಾಡಿದೆ. ಅಷ್ಟೇ ಅಲ್ಲದೇ ಇರಾನ್‌ ಸೌದಿಯ ತೈಲ ಸಂಸ್ಕರಣಾ ಘಟಕಗಳ ಮೇಲೆ ಡ್ರೋನ್‌ ದಾಳಿ ನಡೆಸಿದೆ. ಈ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಕಚ್ಚಾ ತೈಲಗಳ ಬೆಲೆ ಏರಿಕೆ ಕಾಣುತ್ತಿವೆ.

ತೈಲ ವಿಚಾರಲ್ಲಿ ಇಡೀ ವಿಶ್ವ ಈಗ ಬಿಕ್ಕಟ್ಟು ಎದುರಿಸುವ ಸಂದರ್ಭದಲ್ಲಿ ರಷ್ಯಾ ಕಚ್ಚಾ ತೈಲವನ್ನು ಪೂರೈಸುವುದಾಗಿ ಭಾರತಕ್ಕೆ ಹೇಳಿರುವುದಾಗಿ ರಷ್ಯಾದ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಭಾರತವು ಸುಮಾರು 25 ದಿನಗಳ ಕಚ್ಚಾ ತೈಲ ಮತ್ತು 25 ದಿನಗಳ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನುಗಳನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ, ಇದು ಒಟ್ಟು ದಾಸ್ತಾನಿನ ಸುಮಾರು ಎಂಟು ವಾರಗಳಷ್ಟಿದೆ. ದೇಶದ ಕಚ್ಚಾ ತೈಲ ಆಮದುಗಳಲ್ಲಿ ಕೇವಲ 40% ಮಾತ್ರ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತದೆ, ಉಳಿದ 60% ಇತರ ಮೂಲಗಳಿಂದ ಬರುತ್ತದೆ.

ದೇಶಾದ್ಯಂತ ಇಂಧನ ದಾಸ್ತಾನು ಮತ್ತು ಪೂರೈಕೆ ಸ್ಥಾನಗಳನ್ನು ಮೇಲ್ವಿಚಾರಣೆ ಮಾಡಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.


Spread the love

About Laxminews 24x7

Check Also

ರಷ್ಯಾದ ಇಬ್ಬರು ಮಹಿಳೆಯರ ಜೊತೆ ಸಂಬಂಧವಿದೆ: ಎಪಿಸ್ಟೀನ್‌ ಜೊತೆಗಿನ ಸ್ನೇಹಕ್ಕೆ ಕ್ಷಮೆಯಾಚಿದ ಬಿಲ್‌ ಗೇಟ್ಸ್‌

Spread the loveವಾಷಿಂಗ್ಟನ್‌: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌  ಜೊತೆಗಿನ ಸಂಬಂಧಕ್ಕಾಗಿ ಕ್ಷಮೆಯಾಚಿಸಿದ ಮೈಕ್ರೋಸಾಫ್ಟ್  ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ