Breaking News

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಕುರಿತು ಚರ್ಚಿಸುತ್ತೇವೆ

Spread the love

ಚಿಕ್ಕೋಡಿ: ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜತೆಗೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸಂಸದರ ಕಚೇರಿಯಲ್ಲಿ ಭಾನುವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಮಾತನಾಡಿದ ಅವರು, ಆಡಳಿತಾತ್ಮಕ ದೃಷ್ಟಿಯಿಂದ ಬಹುದಿನದ ಬೇಡಿಕೆಯಾದ ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ಘೋಷಣೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಜಿಲ್ಲೆ ಹಾಗೂ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ. ಈಚೆಗೆ ಸುರಿದ ಮಳೆಯಿಂದ ಜಲಾಶಯಕ್ಕೆ ನೀರು ಸಂಗ್ರಹವಾಗಿದೆ. ಇದರಿಂದ ಕುಡಿಯುವ ನೀರಿಗೆ ತೊಂದರೆ ಇಲ್ಲ. ಮಳೆ ಅಭಾವದಿಂದ ಉಂಟಾದ ಬೆಳೆ ಹಾನಿ ಬಗ್ಗೆ ಸರ್ಕಾರದಿಂದ ಶೀಘ್ರವೇ ಸಮೀಕ್ಷೆ  ನಡೆಸಲಾಗುವುದು ಎಂದರು.
ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ, ಎಚ್.ಎಸ್.ನಸಲಾಪುರೆ, ಶಿವಾನಂದ ಮರ್ಯಾಯಿ, ರುದ್ರಪ್ಪ ಸಂಗಪ್ಪಗೋಳ, ಕಿರಣ ರಜಪೂತ, ಮಾರುತಿ ಕುಂದಿ ಇತರರಿದ್ದರು.

Spread the love

About Laxminews 24x7

Check Also

ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ

Spread the loveರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ