Breaking News

ಕಾನೂನು ಹೇಳಿದಂತೆ ನಡೆಯುತ್ತೇವೆ – ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಡಿಕೆಶಿ ಪ್ರತಿಕ್ರಿಯೆ

Spread the love

ಬೆಂಗಳೂರು: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ‌‌ ಸಿಎಂ‌ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಪತ್ರ ಬರೆದಿರುವುದು ನಿಜ.‌ ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.

ಪತ್ರ ಬರೆದ ವಿಚಾರವಾಗಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್‌.ಡಿ ಕುಮಾರಸ್ವಾಮಿಯವರು, ಬೆಂಗಳೂರು – BMICP ಯೋಜನೆಯಲ್ಲಿ ನಡೆದ ಅಕ್ರಮಗಳ ಕುರಿತು ನಾನು ಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದೇನೆ. NICE ಕಾನೂನುಗಳನ್ನು ಉಲ್ಲಂಘಿಸಿದೆ ಎಂಬುದನ್ನು ನಾನು ಪತ್ರದಲ್ಲಿ ವಿವರಿಸಿದ್ದೇನೆ.

ಭೂಸ್ವಾಧೀನ ನಡೆದು 23 ವರ್ಷಗಳು ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಗದ ಕಾರಣ, ಅವರಲ್ಲಿ ಅನೇಕರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.  


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ