Breaking News

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರ ಸುಗ್ರೀವಾಜ್ಞೆ

Spread the love

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಇನ್ನು‌ ಮುಂದೆ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.

ಕರ್ನಾಟಕ ಸಾಂಕ್ರಾಮಿಕ ರೋಗ ನಿಯಮಾವಳಿ 2020 ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಜಾರಿಗೆ‌ ತಂದಿದೆ. ಈ ಸುಗ್ರೀವಾಜ್ಞೆ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಇಲ್ಲವೆ, ಕರವಸ್ತ್ರ, ಅಥವಾ ಬಟ್ಟೆಯನ್ನು ಬಾಯಿ, ಮೂಗು ಮುಚ್ಚುವಂತೆ ಧರಿಸುವುದು ಕಡ್ಡಾಯವಾಗಿದೆ.

ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಅದೇ ರೀತಿ ಪರಸ್ಪರ ಒಂದು‌ ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಈ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ದಂಡ ಪ್ರಯೋಗ ಮಾಡಲಾಗುತ್ತದೆ ಎಂದು ಆದೇಶ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘನೆ ಮಾಡಿದರೆ ಸ್ಥಳದಲ್ಲೇ 200 ರೂ. ದಂಡ ವಿಧಿಸಲಾಗುತ್ತದೆ.

ಇನ್ನು ಪಾಲಿಕೆ ವ್ಯಾಪ್ತಿಯ ಹೊರಗಡೆ ನಿಯಮ ಉಲ್ಲಂಘನೆ ಮಾಡಿದರೆ 100 ರೂ. ದಂಡ ವಿಧಿಸಲಾಗುತ್ತದೆ. ಸಬ್ ಇನ್ಸ್‌ಪೆಕ್ಟರ್ ಮತ್ತು ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳು, ಪಾಲಿಕೆಯ ಆರೋಗ್ಯಾಧಿಕಾರಿ, ಪಿಡಿಒಗಳಿಗೆ ದಂಡ ವಿಧಿಸುವ ಅಧಿಕಾರ ನೀಡಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ