Breaking News

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಎಚ್ಚರಿಕೆ – ಐದು ದಿನ ಆರೆಂಜ್ ಅಲರ್ಟ್‌

Spread the love

ಕಾರವಾರ: ರಾಜ್ಯದಲ್ಲಿ ಮುಂಗಾರು ಕೊರತೆ ನಡುವೆ ಇದೀಗ ಮಳೆಯು ತನ್ನ ವೇಗ ಪಡೆದುಕೊಳ್ಳುವ ಮುನ್ಸೂಚನೆ ದುರೆತಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚುತಿದ್ದು, ಜಿಲ್ಲೆಯಲ್ಲಿ ಐದು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಜಿಲ್ಲೆಯಲ್ಲಿ ಜೂ.27ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಕಾರ್ಯಾಚರಣೆ ಕಚೇರಿ ಪ್ರಾರಂಭ ಸಹ ಮಾಡಲಾಗಿದೆ. ಮಳೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಸಾರ್ವಜನಿಕರಿಗೆ ಮನವಿ‌ ಮಾಡಿದ್ದಾರೆ.

ಅಬ್ಬರದ ಮಳೆಯ ಜೊತೆಗೆ 40 km/h ವೇಗವಾಗಿ ಗಾಳಿ ಬೀಸಲಿದ್ದು ಕೆರೆ, ನದಿ, ಸಮುದ್ರ ತೀರಕ್ಕೆ ಹೊಗದಂತೆ ಕಟ್ಟೆಚ್ಚರ ನೀಡಲಾಗಿದೆ. ಭೂ ಕುಸಿತ ಪ್ರದೇಶದಲ್ಲಿ ಜನ ಎಚ್ಚರಿಕೆಯಿಂದ ಇರಲು ತಿಳಿಸಲಾಗಿದೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ