Breaking News

ಏನೇ ಭಿನ್ನಾಭಿಪ್ರಾಯಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ: ಪ್ರದೀಪ್ ಈಶ್ವರ್‌

Spread the love

ಚಿಕ್ಕಬಳ್ಳಾಪುರ: ಎಂ.ಸಿ ಸುಧಾಕರ್‌ ಹಾಗೂ ಶಾಸಕ ಪ್ರದೀಪ್‌ ಈಶ್ವರ್‌  ನಡುವೆ ಬಿನ್ನಾಭಿಪ್ರಾಯಗಳು ಕೇಳಿಬಂದ ಹಿನ್ನೆಲೆಯಲ್ಲೇ ಪ್ರದೀಪ್‌ ಈಶ್ವರ್‌ ಸೋಷಿಯಲ್‌ ಮೀಡಿಯಾ Xನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಎಂ.ಸಿ. ಸುಧಾಕರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ದೂರು ನೀಡಿದೆ.

ಶಾಸಕರ ಕಾರ್ಯವೈಖರಿ, ಪಕ್ಷ ಸಂಘಟನೆ, ಸ್ಥಳೀಯ ಚುನಾವಣೆಗಳು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ವಿಚಾರ ಸೇರಿದಂತೆ ಹಲವು ಅಂಶಗಳ ಬಗ್ಗೆ ನಿಯೋಗ ಅಹವಾಲು ಸಲ್ಲಿಸಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯವನ್ನೂ ಮುಖಂಡರು ಮುಂದಿಟ್ಟಿದ್ದಾರೆ.

X ನಲ್ಲಿ ಪ್ರದೀಪ್ ಈಶ್ವರ್ ಸ್ಪಷ್ಟನೆ ಏನು?
ಈ ಬೆಳವಣಿಗೆಯ ಬೆನ್ನಲ್ಲೇ ಪ್ರದೀಪ್ ಈಶ್ವರ್ ತಮ್ಮ X ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

“ಏನೇ ಭಿನ್ನಾಭಿಪ್ರಾಯಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ, ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ. ನನಗೆ ನನ್ನ ಪಕ್ಷವೇ ಮುಖ್ಯ, ನನ್ನ ಕಾಂಗ್ರೆಸ್ ಪಕ್ಷದ ಭವಿಷ್ಯವೇ ಮುಖ್ಯ. ಕಾಂಗ್ರೆಸ್ ಪಾರ್ಟಿ ಕಚೇರಿಯಲ್ಲಿ ಕಸ ಗುಡಿಸಲು ನಾನು ಸಿದ್ಧ” ಎಂದು ಅವರು ಹೇಳಿದ್ದಾರೆ.

ಜೊತೆಗೆ 2028ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಹಾಗೂ 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬ ಆಶಯವನ್ನೂ ತಮ್ಮ ಪೋಸ್ಟ್‌ನಲ್ಲಿ ವ್ಯಕ್ತಪಡಿಸಿದ್ದಾರೆ.

ಇತ್ತ, ಸುಧಾಕರ್ ನೇತೃತ್ವದ ನಿಯೋಗದ ದೂರು ಮತ್ತು ಪ್ರದೀಪ್ ಈಶ್ವರ್ ಅವರ X ಪೋಸ್ಟ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕಾಂಗ್ರೆಸ್‌ನೊಳಗಿನ ಭಿನ್ನಾಭಿಪ್ರಾಯದ ಚರ್ಚೆ ಮತ್ತಷ್ಟು ತೀವ್ರವಾಗಿದೆ.


Spread the love

About Laxminews 24x7

Check Also

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Spread the loveಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ