Breaking News

ರಾಮಮಂದಿರಕ್ಕೆ ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೆ ಲೆಕ್ಕ ಎಲ್ಲಿ – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

Spread the love

ಬೆಂಗಳೂರು: ರಾಮ ಮಂದಿರಕ್ಕೆ ಮುಕೇಶ್‌ ಅಂಬಾನಿ 900 ಕೋಟಿ ಹಣ ದೇಣಿಗೆ ನೀಡಿದ್ದರು. ಅದಕ್ಕೆ ಲೆಕ್ಕ ಇಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್‌, ಇತಿಹಾಸದಲ್ಲಿ ಮಹಮ್ಮದ್ ಘಜ್ನಿ ಬಿಟ್ಟರೆ ಬಿಜೆಪಿಯವರೇ ದೇಶವನ್ನ ಲೂಟಿ ಮಾಡಿದ್ದು ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರ ದೇಣಿಗೆ ವಿವಾದ  ಕುರಿತು ಶಿವಸೇನೆ ಸಂಜಯ್ ರಾವತ್ ಪ್ರಶ್ನೆಕೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಇತಿಹಾಸ ಅಂದ್ರೆ ಮಹಮ್ಮದ್ ಘಜ್ನಿ ಅಂತಾರೆ, ಲೂಟಿ ಹೊಡೆದವನು ಅಂತ ಬಿಜೆಪಿಯವರು ಪದೇ ಪದೇ ಹೇಳ್ತಾರೆ. ಘಜ್ನಿ ಬಿಟ್ಟರೆ ಬಿಜೆಪಿಯವರೇ ಲೂಟಿ ಮಾಡಿದ್ದು. ಈ ಹಿಂದೆ ರಾಮಮಂದಿರ ಕಟ್ತೇವೆ ಅಂತ ಲೂಟಿ ಹೊಡೆದಿದ್ರು. ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ. ಈಗ ಪೇಜಾವರ ಶ್ರೀಗಳು ಲೆಕ್ಕ ಕೇಳಿದ್ದಾರೆ. ಪ್ರಹ್ಲಾದ್ ಜೋಶಿ  ಶ್ರೀಗಳ ವಿರುದ್ಧ ಇದ್ದಾರಾ? ಶ್ರೀಗಳ ಮಾತಿಗೆ ಏನು ಹೇಳ್ತಾರೆ ಎಂದು ಪ್ರಶ್ನಿಸಿದರು.

ರಾಮಮಂದಿರ ದೇಣಿಗೆ ವಿವಾದ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಜೋಶಿ ಅವರು ಕೇಂದ್ರದ ಮಂತ್ರಿ, ಅಪಾರ ಜ್ಞಾನಭಂಡಾರದ ಮೂರ್ತಿ. ನನಗೆ ಹೇಳ್ತಾರಂತೆ ನಾನ್ಯಾಕೆ ಅವರ ಮಾತು ಕೇಳಬೇಕು? ಹಿಂದೆ ಯಡಿಯೂರಪ್ಪ ಪಕ್ಷ ತೊರೆದಿದ್ರು ಆಗ ಅವರ ಬಗ್ಗೆ ಜೋಶಿ ಏನೇನೆಲ್ಲ ಹೇಳಿದ್ರು? ಈಗ ಅವರ ಪಾದಪೂಜೆ ಮಾಡ್ತಾರೆ ರಾಮಮಂದಿರ ಟ್ರಸ್ಟ್ ನವರು ಲೆಕ್ಕ ಕೊಡಲ್ಲ ಅಂತಾರೆ. ಇವರು ರಾಮನನ್ನೂ ಬಿಟ್ಟಿಲ್ಲ. ರಾಮನ ಹೆಸರಲ್ಲಿ ಕಳ್ಳತನ, ಲೂಟಿ ಮಾಡಿದ್ರು ಎಂದು ಕಿಡಿ ಕಾರಿದರು.

ಬಿಡದಿ ಟೌನ್ ಶಿಪ್ ವಿವಾದ ಚರ್ಚೆಗೆ ಸಿಎಂ ಬರಲಿಲ್ಲ ಎಂಬ ಹೆಚ್‌ಡಿಕೆ ಆರೋಪಕ್ಕೆ ಪ್ರತಿಕ್ರಿಯಿಸಿ, ಸಿಎಂ ವಿಧಾನಸೌಧಕ್ಕೆ ಚರ್ಚೆಗೆ ಬನ್ನಿ ಅಂದಿದ್ರು, ಎಲ್ಲೋ ರಸ್ತೆಯಲ್ಲಿ ಕುಳಿತು ಮಾತನಾಡೋಕೆ ಆಗುತ್ತಾ? ನಾವು ರೈತರು, ಕಾರ್ಮಿಕರ ಜೊತೆ ಮಾತನಾಡ್ತೇವೆ. ಬನ್ನಿ ಪವಿತ್ರವಾದ ವಿಧಾನಸೌಧದಲ್ಲಿ ಮಾತನಾಡೋಣ. ದೆಹಲಿ ಗಡಿಯಲ್ಲಿ ರೈತರ ಹೋರಾಟ ಆಯ್ತು, 700 ಜನ ರೈತರು ಅಲ್ಲಿ ಸತ್ರು. ಪ್ರಧಾನಿ ಒಂದೇ ಒಂದು ದಿನ ಮಾತನಾಡಿದ್ರಾ..? ಸುಮ್ಮನೆ ರೈತರ ಪರ ಅಂದ್ರೆ ಒಪ್ತಾರಾ…? ಎಂದು ಕುಟುಕಿದರು.


Spread the love

About Laxminews 24x7

Check Also

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

Spread the love ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ