Breaking News

ಬೆಳಗಾವಿ:ಡಿವೋರ್ಸ್‌ ಕೇಳಿದ್ದಕ್ಕೆ ಪತ್ನಿಯ ಬರ್ಬರ ಹತ್ಯೆ – ಹಂತಕನಿಗಾಗಿ ತೀವ್ರ ಶೋಧ

Spread the love

ಬೆಳಗಾವಿ: ಪತ್ನಿ ವಿಚ್ಛೇದನ  ಕೇಳಿದ್ದಕ್ಕೆ ಸಿಟ್ಟಿಗೆದ್ದ ಪತಿ  ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಪ್ರಕರಣ ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ನಡೆದಿದೆ.

ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮಿ ಮಾಡಮಗೇರಿ (31) ಕೊಲೆಯಾದ ದುರ್ದೈವಿ. ರಾಜು ಮಾಡಮಗೇರಿ ಪತ್ನಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಐದು ವರ್ಷಗಳ ಹಿಂದೆ ಇಬ್ಬರು ಪ್ರೀತಿಸಿ ಮದುವೆ ಆಗಿದ್ದರು. ಎರಡು ವರ್ಷದಿಂದ ಇಬ್ಬರ ನಡುವೆ ಮನಸ್ತಾಪ ಇತ್ತು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ವಿಚ್ಛೇದನ ನೀಡುವಂತೆ ಲಕ್ಷ್ಮಿ ಕೇಳಿದ್ದಳು.

ಪತ್ನಿ ವಿಚ್ಛೇದನ ಕೇಳಿದ್ದಕ್ಕೆ ರಾಜು ಕೋಪಗೊಂಡಿದ್ದ. ಇದರಿಂದ ಸಂಚು ಮಾಡಿ, ಪತ್ನಿ ಕೆಲಸಕ್ಕೆ ಹೋಗಿ ಬರುವಾಗ, ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಅಲ್ಲಿ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.

ಪರಾರಿ ಆಗಿರುವ ಹಂತಕ ರಾಜು ಮಾಡಮಗೇರಿ ಬಂಧನಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Spread the loveಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ