Breaking News

ಮರಿಗಳ ಜೊತೆ ಕಾಡಾನೆಗಳ ದಾಂಧಲೆ – ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟ ನಾಶ

Spread the love

ಹಾಸನ: ಮರಿಗಳ ಜೊತೆ ಕಾಡಾನೆಗಳು  ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟವನ್ನು  ನಾಶಪಡಿಸಿರುವ ಘಟನೆ ಹಾಸನ  ಜಿಲ್ಲೆ, ಬೇಲೂರು  ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಗನ್ನಾಥ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸ್ವಾಮಿ ಎಂಬುವವರಿಗೆ ಸೇರಿದ ಜಮೀನು ಇದಾಗಿದ್ದು, ಕಾಡಾನೆಗಳ ಹಿಂಡು ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ನಾಶ ಮಾಡಿದೆ. ಈ ಪರಿಣಾಮ ಮಾಲೀಕರಿಗೆ ಸುಮಾರು 6 ಲಕ್ಷ ರೂ.ಗೂ ಅಧಿಕ ನಷ್ಟವುಂಟಾಗಿದೆ.

ಮರಿಗಳು ಸೇರಿ ಸುಮಾರು ಇಪ್ಪತ್ತಕ್ಕೂ ಹೆಚ್ಚಿರುವ ಕಾಡಾನೆಗಳ ಹಿಂಡು ಕಾಫಿ ತೋಟದಲ್ಲೇ ಬೀಡುಬಿಟ್ಟಿದೆ. ಮರಿಗಳು ಇರುವುದರಿಂದ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಪಟಾಕಿ ಸಿಡಿಸಲು ಹಿಂದೇಟು ಹಾಕಿದ್ದಾರೆ. ಅಲ್ಲದೇ ಪಟಾಕಿ ಸಿಡಿಸಿದರೆ ಮನುಷ್ಯರ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ