Breaking News

ಸೂಪರ್ ಸೀಡ್ ಆಗುತ್ತಾ ಬೆಳಗಾವಿ ಮಹಾನಗರ ಪಾಲಿಕೆ…? RC ನೋಟಿಸ್ ನಲ್ಲಿ ಏನಿದೆ

Spread the love

ಬೆಳಗಾವಿ : ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ ಎಂದು ಗೊತ್ತುವಳಿ ಮಂಡಿಸುವಂತೆ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಕನ್ನಡ ಸಂಘಟನೆಗಳ‌ ನಡುವಿನ ಜಟಾಪಟಿ ಮುಂದುವರಿದಿದೆ. ಮಂಗಳವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಹಾಗೂ ನಾಮನಿರ್ದೇಶಿತ ಸದಸ್ಯರು ಆಡಳಿತ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದರು.
ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್….?
ಕಳೆದ ಮೂರು ತಿಂಗಳಿಂದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಯದೆ ಆಡಳಿತಾತ್ಮಕ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ, ಬೆಳಗಾವಿ ಮಹಾನಗರ ಪಾಲಿಕೆಯನ್ನು ‘ಸೂಪರ್ ಸೀಡ್’ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವ ಪ್ರಕ್ರಿಯೆ ಚುರುಕುಗೊಂಡಿದೆ.
ಕನ್ನಡ ಸಂಘಟನೆಗಳ ಮನವಿಗೆ ಸ್ಪಂದಿಸಿರುವ ಪ್ರಾದೇಶಿಕ ಆಯುಕ್ತರು, ಪಾಲಿಕೆ ಆಯುಕ್ತರಿಂದ ಮೂರು ದಿನಗಳೊಳಗೆ ಸಮಗ್ರ ವಾಸ್ತವ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ನೇತೃತ್ವದ ನಿಯೋಗ ಆ.12ರಂದು ಪ್ರಾದೇಶಿಕ ಆಯುಕ್ತರನ್ನು ಭೇಟಿ ಮಾಡಿ ಪಾಲಿಕೆಯ ಆಡಳಿತಾತ್ಮಕ ಪರಿಸ್ಥಿತಿ ಕುರಿತು ಮನವಿ ಸಲ್ಲಿಸಿತ್ತು.
ಈ ಮನವಿಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪಾಲಿಕೆ ಆಯುಕ್ತರಿಗೆ ಪತ್ರ ರವಾನಿಸಲಾಗಿದೆ. ಮನವಿಯಲ್ಲಿ ಉಲ್ಲೇಖಿಸಿರುವ ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಪ್ರಸ್ತುತ ವಾಸ್ತವ ಪರಿಸ್ಥಿತಿಯ ಸಮಗ್ರ ವರದಿಯನ್ನು ಮೂರು ದಿನಗಳೊಳಗೆ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.
ಪಾಲಿಕೆ ಆಯುಕ್ತರು ಸಲ್ಲಿಸುವ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು, ಬೆಳಗಾವಿ ಮಹಾನಗರ ಪಾಲಿಕೆಯನ್ನು ‘ಸೂಪರ್ ಸೀಡ್’ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ

Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ