Breaking News

ಬೆಲೆ ಏರಿಕೆ ಕೂಡಲೇ ಹಿಂಪಡೆಯಲಿ: ಕಿರಣ ಜಾಧವ ಆಗ್ರಹ

Spread the love

ಬೆಳಗಾವಿ: ಹಾಲು, ಮೊಸರು, ಬಸ್ ಟಿಕೆಟ್ ಸೇರಿದಂತೆ ಅಗತ್ಯ ವಸ್ತುಗಳು ಹಾಗೂ ಸೇವೆಗಳ ಬೆಲೆ ಏರಿಕೆಯನ್ನು ರಾಜ್ಯ ಸರಕಾರ ಕೂಡಲೇ ಹಿಂಪಡೆಯಬೇಕು. ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ, ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ಮುಖಂಡ ಕಿರಣ ಜಾಧವ ಆಗ್ರಹಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರಕಾರ ಅಗತ್ಯ ವಸ್ತುಗಳು ಹಾಗೂ ಸಾರಿಗೆ ಸೇವೆಗಳ ದರ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಿದೆ. ಈಗಾಗಲೇ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಜನರಿಗೆ ಬೆಲೆ ಏರಿಕೆಯ ಬರೆ ಎಳೆಯುವ ಮೂಲಕ ಸರಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ಅವರು ಟೀಕಿಸಿದ್ದಾರೆ.ರೈತರ ಬಗ್ಗೆ ನಿಜವಾದ ಕಾಳಜಿ ಹೊಂದಿದ್ದರೆ, ಸಂಕಷ್ಟದಲ್ಲಿರುವ ರೈತರಿಗೆ ಸಮರ್ಪಕ ಬರ ಪರಿಹಾರ ಒದಗಿಸಬೇಕಿತ್ತು. ಹಾಲು ಉತ್ಪಾದಕರಿಗೆ ಆಗುತ್ತಿರುವ ನಷ್ಟವನ್ನು ಸರಕಾರವೇ ಭರಿಸಬೇಕಿತ್ತು. ಆದರೆ ರೈತರ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸುವುದು ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕಾದ ಕಾಂಗ್ರೆಸ್ ಸರಕಾರ ಅನಗತ್ಯ ವಿಚಾರಗಳಲ್ಲೇ ಕಾಲಹರಣ ಮಾಡುತ್ತಿದೆ. ಜನರ ನೈಜ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಸರಕಾರ ರಾಜ್ಯದ ಜನತೆಗೆ ಶಾಪವಾಗಿ ಪರಿಣಮಿಸಿದ್ದು, ಈ ಸರಕಾರ ಯಾವಾಗ ಅಧಿಕಾರದಿಂದ ಕೆಳಗಿಳಿಯುತ್ತದೆ ಎಂದು ಜನರು ಕಾಯುವಂತಾಗಿದೆ ಎಂದು ಕಿರಣ ಜಾಧವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನವಿರೋಧಿ ಬೆಲೆ ಏರಿಕೆ ನಿರ್ಧಾರವನ್ನು ತಕ್ಷಣ ಹಿಂಪಡೆದು ಜನಸಾಮಾನ್ಯರಿಗೆ ನೆಮ್ಮದಿ ನೀಡುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪುತ್ರಿಯೊಂದಿಗೆ ಸಲುಗೆ ಕೆಲಸಗಾರನ ಹತ್ಯೆಗೈದ ತಂದೆ

Spread the loveಬೆಂಗಳೂರು: ಮನೆಯಲ್ಲಿ ಪುತ್ರಿಯೊಂದಿಗೆ ಸಿಕ್ಕಿಬಿದ್ದ ಕೇರಳ ಮೂಲದ ಕೆಲಸಗಾರನನ್ನು ತಂದೆಯೇ ಕ್ರಿಕೆಟ್ ಬ್ಯಾಟ್ ಹಾಗೂ ಪೈಪ್‌ನಿಂದ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ