Breaking News

ಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು – ತುಂಡು ತುಂಡಾದ ದೇಹ

Spread the love

ಚಿಕ್ಕಬಳ್ಳಾಪುರ: ಕಸ ವಿಂಗಡನೆ ಯಂತ್ರಕ್ಕೆ  ಸಿಲುಕಿ ಮಹಿಳೆ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ.

ಕಾಡತಿಪ್ಪೂರು ಮೂಲದ ಅರಸಮ್ಮ(45) ಮೃತ ದುರ್ದೈವಿ. ಯಂತ್ರದ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮಹಿಳೆ ಸಿಲುಕಿ ಸಾವನ್ನಪ್ಪಿದ್ದಾರೆ. ಯಂತ್ರಕ್ಕೆ ಮಹಿಳೆ ಸಿಲುಕಿದ ಪರಿಣಾಮ, ಕೈ ಕಾಲು ತುಂಡಾಗಿ ಬಿದ್ದಿದ್ದವು.

ಮಹಿಳೆ ಈ ಘಟಕದಲ್ಲಿ ಕಳೆದ ಮೂರ್ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರಿನ ಕಸವನ್ನ ತಂದು ಈ ಘಟಕದಲ್ಲಿ ವಿಂಗಡಣೆ ಮಾಡಲಾಗುತ್ತಿತ್ತು. ಇಂದು (ಅ.2) ಬೆಳಗ್ಗೆ ಕಸ ವಿಂಗಡಣೆ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.

ದೊಡ್ಡಬೆಳವಂಗಲ ಪೋಲೀಸ್  ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ