Breaking News

ಮಹಿಳೆ ಅನುಮಾನಾಸ್ಪದ ಸಾವು – ಗಂಡನ ಮನೆಯ ಮುಂದೆ ಶವವಿಟ್ಟು ಪ್ರತಿಭಟನೆ

Spread the love

ಹಾವೇರಿ: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ನೇಣಿಗೆ ಶರಣಾಗಿದ್ದು, ಗಂಡನ ಮನೆಯ ಸದಸ್ಯರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಗಂಡನ ಮನೆಯ ಮುಂದೆ ಮಹಿಳೆಯ ಮೃತದೇಹ ಇಟ್ಟು ಪ್ರತಿಭಟನೆ ಮಾಡಿದ ಘಟನೆ ಹಾವೇರಿ  ಜಿಲ್ಲೆ ಹಾನಗಲ್  ತಾಲೂಕಿನ ಕಾಲ್ವೇಕಲ್ಲಾಪೂರ ಗ್ರಾಮದಲ್ಲಿ ನಡೆದಿದೆ.

ನೀಲಮ್ಮ ನೀರಲಗಿ (24) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ಕಳೆದ ಮೂರು ತಿಂಗಳ ಹಿಂದೆ ಗಂಡ ಶಿವಾನಂದ ಸಾವನ್ನಪ್ಪಿದ್ದ. ಆಸ್ತಿ ವಿಚಾರವಾಗಿ ಗಂಡನ ಮನೆಯವರು ಮಹಿಳೆಯನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. 5 ಎಕರೆ ಜಮೀನು ಕೊಡಬೇಕಲ್ಲ ಎಂಬ ದುರಾಸೆಯಿಂದ ಮಹಿಳೆಯನ್ನ ಕೊಲೆ ಮಾಡಿದ್ದಾರೆ. ನೀಲಮ್ಮ ಕುಟುಂಬಸ್ಥರಿಂದ ಮನೆ ಮುಂದೆ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಬ್ಬರು ಮಕ್ಕಳನ್ನ ಕರೆದುಕೊಂಡು ಬರಬೇಕು, ತಪ್ಪಿತಸ್ಥರನ್ನು ಬಂಧನ ಮಾಡಬೇಕು, ಅಲ್ಲಿಯವರೆಗೂ ಶವ ತೆಗೆಯಲ್ಲ ಎಂಬ ಪಟ್ಟು ಹಿಡಿದು ಕುಟುಂಬದ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ – ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್

Spread the loveಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ  ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಕೇಸ್ ಸಂಬಂಧ ಜೈಲಧಿಕಾರಿಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ