Breaking News

ತವರು ಮನೆಯಿಂದ ಹೋದ ಮಹಿಳೆ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ

Spread the love

 ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ 33 ವರ್ಷದ ಕಮಲವ್ವ ಪಾಂಡಪ್ಪ ಚಂದರಗಿ ಎಂಬ ಮಹಿಳೆ ಕಾಣೆಯಾಗಿದ್ದಾರೆ.

ಮನ್ನಿಕೇರಿ ಗ್ರಾಮದ ತಮ್ಮ ತವರು ಮನೆಯಿಂದ ಹೊರಗೆ ಹೋದ ಕಮಲವ್ವ ಅವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಮಹಿಳೆಯ ಚಹರೆ: ಸುಮಾರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ದುಂಡು ಮೂಗು ಹಾಗೂ ಗೋಧಿಗೆಂಪು ಮೈಬಣ್ಣ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುವ ಅವರು ಕಾಣೆಯಾದ ಸಂದರ್ಭದಲ್ಲಿ ಬೂದು ಬಣ್ಣದ ಚೂಡಿದಾರ ಧರಿಸಿದ್ದರು.

ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಕುಲಗೋಡ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08334-222233 ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

Spread the loveಬೆಂಗಳೂರು: ಕಳ್ಳತನಕ್ಕೆ ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕನೊಬ್ಬ ತಪ್ಪಿಸಿಕೊಳ್ಳಲು ಯುವತಿಯನ್ನೇ ನಡು ರಸ್ತೆಯಲ್ಲಿ ಎಳೆದಾಡಿ ಬೆದರಿಸಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ