ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬಳು ನಗರದಲ್ಲಿ ಹರಿಯುವ ತುಂಗಾ ನದಿಗೆ ಹಾರಿದ್ದು, ಅಲ್ಲೇ ಇದ್ದ ಯುವಕರು ಮಹಿಳೆ ಹಾಗೂ ಆಕೆಯ ಮಗನನ್ನು ರಕ್ಷಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ.
ಚಿತ್ರದುರ್ಗ ಮೂಲದ ಮಹಿಳೆ ನದಿಗೆ ಹಾರಿದ್ದರು. ಅದೃಷ್ಟವಶಾತ್ ಮಹಿಳೆ ಹಾಗೂ ಆಕೆಯ 11 ತಿಂಗಳ ಮಗನನ್ನು ಜನ ಬಚಾವ್ ಮಾಡಿದ್ದಾರೆ. ಆದರೆ ಇನ್ನಿಬ್ಬರು ಮಕ್ಕಳಾದ ಸಾನ್ವಿಕಾ (6), ತನ್ವಿಕಾ (4) ತುಂಗಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದ್ದು, ತಾಯಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಚಿತ್ರದುರ್ಗದಿಂದ ಮಧ್ಯಾಹ್ನ ಬಸ್ನಲ್ಲಿ ನಗರಕ್ಕೆ ಮಹಿಳೆ ಬಂದಿದ್ದಳು. ಶಿವಮೊಗ್ಗ ನಗರದ ಚಿಕ್ಕಲ್ ರಸ್ತೆಯ ಶ್ರೀ ಅರಕೇಶ್ವರ ದೇವಾಲಯದ ಬಳಿ ತೆರಳಿ ಮೊದಲು ಇಬ್ಬರು ಹೆಣ್ಣು ಮಕ್ಕಳನ್ನು ನದಿಗೆ ತಳ್ಳಿ, ಬಳಿಕ 11 ತಿಂಗಳ ಮಗು ಜೊತೆ ನದಿಗೆ ಹಾರಿದ್ದ ಮಹಿಳೆ ಹಾರಿದ್ದಳು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಹಾಗೂ ಮಗುವಿಗೆ ಚಿಕಿತ್ಸೆ ನಡೆಯುತ್ತಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7