Breaking News

ಬಸ್ ನಿಲ್ದಾಣದಲ್ಲೇ ಮಹಿಳೆಯ ಸರ ಕಳ್ಳತನ: ಕಣ್ಣಿರಿಟ್ಟ ಮಹಿಳೆ, ಪೊಲೀಸರಿಂದ ತಲಾಶ್

Spread the love

ಬೆಳಗಾವಿ: ಬೈಲಹೊಂಗಲ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಸುಮಾರು 5.50 ಲಕ್ಷ ರೂ. ಮೌಲ್ಯದ 3.5 ತೊಲಿ ಬಂಗಾರದ ಆಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.

ತಾಲೂಕಿನ ನನಗುಂಡಿಕೊಪ್ಪ ಗ್ರಾಮದ ಮಂಗಲಾ ಬಸಯ್ಯ ದೇಸಾಯಿ (35) ಬಂಗಾರ ಕಳೆದುಕೊಂಡವರು. ಅವರು ನನಗುಂಡಿಕೊಪ್ಪದಿಂದ ಬೈಲಹೊಂಗಲ ಕೇಂದ್ರ ಬಸ್ ನಿಲ್ದಾಣಕ್ಕೆ ಬಂದು ಇಳಿದು, ಬಳಿಕ ಮರಕುಂಬಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಲು ಬೈಲಹೊಂಗಲ–ಯರಗಟ್ಟಿ ಬಸ್ ಹತ್ತಿದ್ದರು. ಬಸ್ ಹತ್ತಿದ ಕೆಲವೇ ಕ್ಷಣಗಳಲ್ಲಿ ಕೊರಳನ್ನು ಗಮನಿಸಿದಾಗ ಬಂಗಾರದ ಆಭರಣ ಕಾಣೆಯಾಗಿರುವುದು ಗೊತ್ತಾಗಿದೆ.

ಆಭರಣ ಕಳುವಾಗಿರುವುದು ತಿಳಿಯುತ್ತಿದ್ದಂತೆ ಮಂಗಲಾ ಅವರು ಆತಂಕಗೊಂಡು ಕಣ್ಣೀರಿಡುತ್ತಾ ಚೀರಾಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಂಬಂಧಿಸಿದ ಬಸ್‌ನ್ನು ಪ್ರಯಾಣಿಕರ ಸಮೇತ ಬೈಲಹೊಂಗಲ ಪೊಲೀಸ್ ಠಾಣೆಗೆ ಕರೆತಂದು ಪರಿಶೀಲನೆ ನಡೆಸಿದರು.

ಬಸ್‌ನಲ್ಲಿದ್ದ ಮಹಿಳೆಯರು, ಪುರುಷರು ಸೇರಿದಂತೆ 80ಕ್ಕೂ ಹೆಚ್ಚು ಪ್ರಯಾಣಿಕರನ್ನು ಪೊಲೀಸರು ತಪಾಸಣೆ ನಡೆಸಿದರೂ ಆಭರಣ ಪತ್ತೆಯಾಗಲಿಲ್ಲ. ಬಳಿಕ ಬಸ್‌ನ್ನು ಪ್ರಯಾಣ ಮುಂದುವರಿಸಲು ಕಳುಹಿಸಲಾಯಿತು.

ಈ ನಡುವೆ ಬಂಗಾರ ಕಳ್ಳತನ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಬಸ್ ನಿಲ್ದಾಣದ ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಕರಣ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


Spread the love

About Laxminews 24x7

Check Also

ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

Spread the loveಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ