Breaking News

ಅಕ್ರಮ ಸರಾಯಿ ಮಾರಾಟಕ್ಕೆ ಕಡಿವಾಣ ಹಾಕಿ; ಮಹಿಳೆಯರ ಪ್ರತಿಭಟನೆ

Spread the love

ಬೆಳಗಾವಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಬೆಳಗಾವಿ ತಾಲೂಕಿನ ಚಚಡಿ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.

ಶುಕ್ರವಾರ ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಗರ ಆಗಮಿಸಿದ ಚಚಡಿ ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು.

ಗ್ರಾಮದಲ್ಲಿರೋ ಬಹುತೇಕ ಅಂಗಡಿಕಾರರು ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಇದರ ಪರಿಣಾಮ ಗ್ರಾಮದಲ್ಲಿರೋ ಕುಟುಂಬಗಳು ಬೀದಿಗೆ ಬುರುತ್ತಿವೆ. ಕುಟುಂಬಗಳ ಶಾಂತಿ, ನೆಮ್ಮದಿ ಹಾಳಾಗುತ್ತಿದೆ. ಗ್ರಾಮದಲ್ಲಿ ಆರೋಗ್ಯಕರ ವಾತಾವರಣ ಸಂಪೂರ್ಣ ಹದಗೆಟ್ಟಿದ್ದು, ಕುಡಿದುಬಂದು ನಮ್ಮ ಮಕ್ಕಳೇ ನಮ್ಮನ್ನು ಹೊಡೆಯುತ್ತಿದ್ದಾರೆ.

ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಕ್ರಮ ಸಾರಾಯಿ ಮಾರಾಟ ಮಾಡೋರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮದಲ್ಲಿ ಇರುವ ಮದ್ಯ ಅಂಗಡಿ ಬಂದ ಮಾಡಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಬೆಳಗಾವಿ ಡಿಸಿ, ಅಬಕಾರಿ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ