Breaking News

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ

Spread the love

ಬೆಂಗಳೂರು: ಸರ್ಕಾರದಿಂದ ಉದ್ಯೋಗಸ್ಥ ಮಹಿಯರಿಗೆ ಋತುಚಕ್ರ ರಜೆ ನೀಡಲು ಆದೇಶ ಹಿನ್ನೆಲೆಯಲ್ಲಿ ಶಿಕ್ಷಣ ‌ಇಲಾಖೆಯಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ‌ಇಲಾಖೆ ಆಯುಕ್ತರಿಂದ ರಜೆ ನೀಡಲು ಆದೇಶ ಹೊರಡಿಸಿದ್ದು, ಋತುಚಕ್ರ ರಜೆಗೆ ಷರತ್ತು ವಿಧಿಸಲಾಗಿದೆ.

ಷರತ್ತುಗಳೇನು?
1.ಮಹಿಳಾ ನೌಕರರು ಆಯಾ ತಿಂಗಳ ‘ಋತುಚಕ್ರ ರಜೆ’ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ‘ಋತುಚಕ್ರ ರಜೆ’ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ( ಅವಕಾಶವಿರುವುದಿಲ್ಲ.

2.ಪ್ರತಿ ತಿಂಗಳು ಒಂದು ದಿನದ ‘ಋತುಚಕ್ರ ರಜೆ’ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ.

3.ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ಮಹಿಳಾ ಸರ್ಕಾರಿ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.

4.ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು.

5.ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.

6.ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ.


Spread the love

About Laxminews 24x7

Check Also

ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯ; ಚುನಾವಣೆ ಮೀಸಲು ನಿಗದಿ: ಸರ್ಕಾರಕ್ಕೆ ಕೊನೆಯ ಅವಕಾಶ ಕೊಟ್ಟ ಕರ್ನಾಟಕ ಹೈಕೋರ್ಟ್‌

Spread the loveಬೆಂಗಳೂರು: ಅವಧಿ ಪೂರ್ಣಗೊಂಡಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಈ ತಿಂಗಳಾಂತ್ಯಕ್ಕೆ ಅವಧಿ ಮುಗಿಯಲಿರುವ ಗ್ರಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ