Breaking News

ಶಿವಾಪೂರವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಅಣ್ಣಾಸಾಹೇಬ ಜೊಲ್ಲೆ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

Spread the love

ನಿಪ್ಪಾಣಿ:ಪ್ರಕೃತಿಯೇ ನಮ್ಮ ಪ್ರೇರಣೆ, ಪರಿಸರವೇ ನಮ್ಮ ಭವಿಷ್ಯ. ಉತ್ತಮ ಹವಾಮಾನ ಹಾಗೂ ಸುಸ್ಥಿರ ಭವಿಷ್ಯಕ್ಕಾಗಿ ನಾವೆಲ್ಲರೂ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಬೇಕು” ಎಂದು ಮಾಜಿ ಸಚಿವರು ಹಾಗೂ ನಿಪ್ಪಾಣಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಕರೆ ನೀಡಿದರು.

ಕ್ಷೇತ್ರದ ಶಿವಾಪೂರವಾಡಿ ಗ್ರಾಮದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ರವರ “ತಾಯಿಯ ಹೆಸರಿನಲ್ಲಿ ಒಂದು ಮರ” ಅಭಿಯಾನದ ಅಂಗವಾಗಿ, ಸ್ವಂತ ತಾಯಿಯ ಹೆಸರಿನಲ್ಲಿ ಹಾಗೂ ಭೂತಾಯಿಯ ಸೇವೆಯೆಂದು ಈ ಸಸಿ ನೆಡುವ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ಅಣ್ಣಾಸಾಹೇಬ ಜೊಲ್ಲೆ ಅವರು ಮಾತನಾಡಿ, “ಪ್ರಧಾನಿ ಮೋದಿರವರ 12 ವರ್ಷಗಳ ಅಸಾಧಾರಣ ಸಾಧನೆಗಳ ನಡೆಗಳಿಂದಾಗಿ, ಇಂದು ನಾವು ಸಮೃದ್ಧ ಹಾಗೂ ಸಶಕ್ತ ಭಾರತದ ಕಡೆಗೆ ಹೆಜ್ಜೆ ಇಡುತ್ತಿದ್ದೇವೆ. ‘ಒಂದು ರಾಷ್ಟ್ರ, ಒಂದು ದೃಷ್ಟಿ’ ಎಂಬ ಮಂತ್ರದೊಂದಿಗೆ, ಉತ್ತಮ ಭವಿಷ್ಯಕ್ಕಾಗಿ ಮತ್ತು ವಿಕಸಿತ ಭಾರತಕ್ಕಾಗಿ ನಾವೆಲ್ಲರೂ ಕಡ್ಡಾಯವಾಗಿ ಸಸಿ ನೆಟ್ಟು ಪೋಷಿಸಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಪ್ರಮುಖರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಸಸಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.


Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ