2026 ರ ಮಹಿಳಾ ಪ್ರೀಮಿಯರ್ ಲೀಗ್‌ನ15 ನೇ ಪಂದ್ಯವು ವಡೋದರಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ, ಡೆಲ್ಲಿ ತಂಡವನ್ನು ಏಕಪಕ್ಷೀಯವಾಗಿ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲೂ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಡೆಲ್ಲಿ ತಂಡ ಯಶಸ್ವಿಯಾಯಿತು. ಆರ್ಸಿಬಿ ನೀಡಿದ 109 ರನ್‌ಗಳ ಅಲ್ಪ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಇನ್ನು 26 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್ಗಳಿಂದ ಗೆದ್ದುಕೊಂಡಿತು.
ಆರ್ಸಿಬಿ ಪೆವಿಲಿಯನ್ ಪರೇಡ್
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿಗೆ ಸಾಧಾರಣ ಆರಂಭ ಸಿಕ್ಕಿತು. ಮೊದಲ ವಿಕೆಟ್ಗೆ 36 ರನ್‌ಗಳ ಜೊತೆಯಾಟ ಸಿಕ್ಕಿತು. ಹ್ಯಾರಿಸ್ ಈ ಪಂದ್ಯದಲ್ಲೂ ವಿಫಲರಾಗಿ 9 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ತಂಡದ ಪರ ನಾಯಕಿ ಮಂಧಾನ ಏಕಾಂಗಿ ಹೋರಾಟ ನಡೆಸಿ 34 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಹಾಯದಿಂದ 38 ರನ್ ಕಲೆಹಾಕಿದ್ದನ್ನೂ ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂಹ ಪ್ರದರ್ಶನ ಮೂಡಿಬರಲಿಲ್ಲ. ಸ್ಮೃತಿ ಔಟಾದ ಬಳಿಕ ತಂಡದ ಇನ್ನಿಂಗ್ಸ್ ಕುಸಿಯಲಾರಂಭಿಸಿತು. ಅಂತಿಮವಾಗಿ ಆರ್ಸಿಬಿ 109 ರನ್‌ಗಳಿಗೆ ಆಲೌಟ್ ಆಯಿತು.
ಡೆಲ್ಲಿಗೆ ಸುಲಭ ಜಯ
110 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಜೆಮಿಮಾ ರೊಡ್ರಿಗಸ್ ಅವರ ಡೆಲ್ಲಿ ತಂಡವು ಇನ್ನಿಂಗ್ಸ್‌ನ ಆರಂಭದಲ್ಲಿಯೇ ಸ್ಫೋಟಕ ಆರಂಭಿಕರಾದ ಲೆಸ್ಲಿ ಮತ್ತು ಶಫಾಲಿ ವರ್ಮಾ ಅವರ ವಿಕೆಟ್ ಕಳೆದುಕೊಂಡು ಕಳಪೆ ಆರಂಭವನ್ನು ಪಡೆಯಿತು. ಆದಾಗ್ಯೂ, ಇದರ ನಂತರ ಲಾರಾ ವೂಲ್‌ಫೋರ್ಟ್ ಮತ್ತು ನಾಯಕಿ ಜೆಮಿಮಾ ರೊಡ್ರಿಗಸ್ ಅದ್ಭುತ ಪಾಲುದಾರಿಕೆಯನ್ನು ಮಾಡಿ ತಂಡವನ್ನು ಗೆಲುವಿನ ಹತ್ತಿರಕ್ಕೆ ಕೊಂಡೊಯ್ದರು. ಹೀಗಾಗಿ ಡೆಲ್ಲಿ ತಂಡವು ಕೇವಲ 15.4 ಓವರ್‌ಗಳಲ್ಲಿ 110 ರನ್‌ಗಳ ಗುರಿಯನ್ನು ತಲುಪಿ ಆರ್‌ಸಿಬಿಯನ್ನು ಸೋಲಿಸಿ ಲೀಗ್ನಲ್ಲಿ ಮೂರನೇ ಗೆಲುವು ದಾಖಲಿಸಿತು.
Laxmi News 24×7