Breaking News

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು ಅಮಾನತು

Spread the love

ಯಾದಗಿರಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ  ಭಾಗಿಯಾಗಿದ್ದ ಇಬ್ಬರು ಶಿಕ್ಷಕರನ್ನು ಅಮಾನತು  ಮಾಡಿರುವ ಘಟನೆ ಯಾದಗಿರಿಯಲ್ಲಿ  ನಡೆದಿದೆ.

ಹುಣಸಗಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕ ಗುರುರಾಜ್ ಜೋಷಿ ಹಾಗೂ ಕುಪ್ಪಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ ಅಮಾನತಾದ ಶಿಕ್ಷಕರು. ಅಣ್ಣಾ ಸಾಹೇಬ್ ಕಳೆದ ವರ್ಷ ಅಕ್ಟೋಬರ್ 10ರಂದು ಹುಣಸಗಿಯಲ್ಲಿ ಹಮ್ಮಿಕೊಂಡ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಕಳೆದ ವರ್ಷ ಅಕ್ಟೋಬರ್ 12ರಂದು ಗುರುರಾಜ್ ಜೋಷಿ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಹಮ್ಮಿಕೊಂಡ ಆರ್‌ಎಸ್‌ಎಸ್ ಪಥಸಂಚನದಲ್ಲಿ ಭಾಗಿಯಾಗಿದ್ದರು. ಶಿಕ್ಷಕರಿಬ್ಬರು ಕರ್ನಾಟಕ ನಾಗರಿಕ ಸೇವಾ ನಿಯಮ ಉಲ್ಲಂಘನೆ ಹಿನ್ನೆಲೆ ಅಮಾನತು ಮಾಡಲಾಗಿದೆ.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಅವರ ದೂರಿನ ಅನ್ವಯ ತನಿಖೆ ನಡೆಸಿ ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ನಾಡಗೀತೆ ಧಾಟಿ, ಅವಧಿ ನಿಗದಿ ವಿಚಾರ – ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ನಕಾರ

Spread the loveನವದೆಹಲಿ: ನಾಡಗೀತೆ  ಧಾಟಿ ಮತ್ತು ಅವಧಿ ನಿಗದಿ ವಿಚಾರದಲ್ಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್  ನಿರಾಕರಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ