ಯರಗಟ್ಟಿ: 2023 ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಲಲಿಅ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅಭಿವೃದ್ದಿ ಕಾಮಗಾರಿಗಳು ನಡೆದಿದ್ದವು. ಆದ್ರೆ ಬಿಎಸ್ ವೈ ಸರ್ಕಾರದಲ್ಲಿ ಯಾವುದೆ ಕೆಲಸಗಳು ನಡೆಯುತ್ತಿಲ್ಲ. ಕೆಲವು ಕಾಮಗಾರಿಗಳ ಅನುದಾನವು ವಾಪಸ್ ಹೋಗಿದೆ. ಜನತೆ ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಒಂದೇ ಗುಂಪಿರಲಿ:
ಕಾರ್ಯಕರ್ತರು ಭಿನ್ನಾಭಿಪ್ರಾಯ, ಸಮಸ್ಯೆಗಳನ್ನು ಪಕ್ಕಕ್ಕಿಟ್ಟು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಬೇಕು. ಗ್ರಾಮ ಪಂಚಾಯಿತಿ ಚುನಾವಣೆ ಮುಂದಿನ ತಾಲೂಕು, ಜಿಲ್ಲಾ ಹಾಗೂ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.
ಡಿ.ಕೆ. ಶಿವಕುಮಾರ್ ಅವರು, ಅಧ್ಯಕ್ಷರಾದ ಬಳಿಕ ಪಕ್ಷದಲ್ಲಿ ಚೈತನ್ಯ ಬಂದಿದೆ. ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿಶ್ವಾಸ ವೈದ್ಯ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ರೋಹಿನಿ, ಉಮೇಶ ಬಾಳಿ, ರವಿ ಯಲಿಗಾರ ಹಾಗೂ ತಾಪಂ ಜಿಪಂ ಸದಸ್ಯರು ಭಾಗಿಯಾಗಿದ್ದರು.