ಯಾದಗಿರಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಖಾಕಿ ಪಡೆಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಗೌರವ ಸೂಚಿಸಲಾಯಿತು.
ನಗರದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಪದವಿ ಕಾಲೇಜ್ ಹತ್ತಿರ ಪೊಲೀಸರ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸರ ಕಾರ್ಯ ನೆನೆದು ಅವರಿಗೆ ಏಳನೀರು ಕೊಟ್ಟು ಸತ್ಕರಿಸಿದರು. ಈ ಮೂಲಕ ಕೊರೊನಾ ವಾರಿಯರ್ಸ್‍ಗೆ ವಿಶೇಷ ಗೌರವ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಡಾ.ಶರಣಭೂಪಾಲರೆಡ್ಡಿ, ಜೀವದ ಹಂಗು ತೊರೆದು ಹಗಲು ರಾತ್ರಿ ಕೆಲಸ ಮಾಡಿ, ಕೊರೊನಾ ವಿರುದ್ಧ ಹೋರಾಟ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಯಾದಗಿರಿಯಲ್ಲಿ ಈ ವರೆಗೆ ಒಂದೂ ಪ್ರಕರಣ ದೃಢಪಟ್ಟಿಲ್ಲ. ಆದರೂ ಪೊಲೀಸರು ಮುಂಜಾಗೃತಾ ಕ್ರಮ ವಹಿಸಿ ಲಾಕ್‍ಡೌನ್ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದಾರೆ.