ಯಾದಗಿರಿ: ಗ್ರೀನ್ ಝೋನ್ ನಲ್ಲಿರುವ ಯಾದಗಿರಿಯಲ್ಲಿ ಸಡಿಲಿಕೆಯಾಗಿದ್ದ ಲಾಕ್ ಡೌನ್ ಅನ್ನು ದಿಢೀರ್ ಆಗಿ ಮತ್ತಷ್ಟು ಬಿಗಿ ಮಾಡಲಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಸೊಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೊದಲನೆಯ ಹಂತದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿವರೆಗೂ ಮತ್ತೆ ಬೀಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಕೇವಲ ತರಕಾರಿ ಮತ್ತು ಆಸ್ಪತ್ರೆ, ಮೆಡಿಕಲ್ ಶಾಪ್ ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಜೊತೆಗೆ ವೈನ್ ಶಾಪ್ ಸಹ ಬಂದ್ ಮಾಡಲಾಗಿದೆ. ಜಿಲ್ಲಾಧಿಕಾರಿ ಎಂ ಕೂರ್ಮರಾವ್ ಸೂಚನೆ ಮೇರೆಗೆ ಸಹಾಯಕ ಆಯುಕ್ತ ಶಂಕರಗೌಡ ಈ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಸಹಾಯಕ ಆಯುಕ್ತ ಶಂಕರಗೌಡ ಕೂಡ ಸ್ಪಷ್ಟಪಡಿಸಿದ್ದಾರೆ.
ಒಟ್ಟಿನಲ್ಲಿ ಇಡೀ ಯಾದಗಿರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾದಗಿರಿ ಜಿಲ್ಲಾಡಳಿತದ ಈ ದಿಢೀರ್ ನಡೆ ಗ್ರೀನ್ ಝೋನ್ ಜಿಲ್ಲೆಗೂ ಕೊರೊನಾ ಕಂಟಕ ಎದುರಾಯ್ತಾ ಅನ್ನೊ ಪ್ರಶ್ನೆ ಮೂಡಿದೆ.