ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನರೇಗಾ ಯೋಜನೆಯಡಿ ಗ್ರಾಮಮಟ್ಟದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಮಾಸ್ಕ್ ಮತ್ತು ಸಾಬೂನುಗಳನ್ನು ವಿತರಿಸಲಾಯಿತು.
ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ ಮತ್ತು ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ ಅವರ ನೇತೃತ್ವದಲ್ಲಿ ಇಂದು ಅಗಸಗಿ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ಪ್ರಾರಂಭಿಸಿರುವ ಜನರಿಗೆ ಮಾಸ್ಕ್ ಮತ್ತು ಸಾಬೂನುಗಳನ್ನು ವಿತರಿಸಲಾಯಿತು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಾಸಕ ಸತೀಶ ಜಾರಕಿಹೊಳಿ ಅವರು ನಿನ್ನೆ ನಮ್ಮನ್ನು ಕರೆದು ಲಾಕ್‌ಡೌನ್ ಸಡಿಲಿಕೆ ಬಳಿಕ ನರೇಗಾ ಯೋಜನೆಯಡಿ ಗ್ರಾಮಮಟ್ಟದಲ್ಲಿ ಕಾರ್ಯ ಪ್ರಾರಂಭವಾಗಿದೆ. ಅಲ್ಲಿ ಕೆಲಸ ಮಾಡುವ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಣೆ ಮತ್ತು ಜಾಗೃತಿ ಮೂಡಿಸಿ ಎಂದು ಸೂಚನೆ ನೀಡಿ ಅವರಿಗೆ ಮಾಸ್ಕ ಮತ್ತು ಸ್ಯಾನಿಟೈಜರ್ ವಿತರಣೆ ಮಾಡಲು ಹೇಳಿದ್ದರು ಎಂದು ತಿಳಿಸಿದರು.
ನರೇಗಾ ಕಾರ್ಮಿಕರು ಶಾಸಕರ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ಹಿಸುವುದಾಗಿ ಶಪಥ್ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಅಗಸಗಿ ಗ್ರಾಮದ ಹಿರಿಯರು ಇದ್ದರು.