ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 24 ಗಂಟೆಯೊಳಗೆ 2ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಡುವು ನೀಡಿದ್ದಾರೆ.
ನಗರದ ಗಾಂಧಿ ಭವನದಲ್ಲಿ ಗುರುವಾರ 2ಡಿ ಪಡೆದಿರುವ ಪಂಚಮಸಾಲಿ ಸಮಾಜಕ್ಕೆ ನ್ಯಾಯವೋ ಅನ್ಯಾಯವೋ ಎಂಬ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, 24 ಗಂಟೆಯೊಳಗೆ ಮೀಸಲಾತಿ ನೀಡದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಮುಖ್ಯಮಂತ್ರಿ ಸ್ಪರ್ಧಿಸಲಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವ ಕ್ಷೇತ್ರದಿಂದ ಆರಂಭಿಸಲಾಗುವುದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ‘ಅಮ್ಮನ ಮೇಲೆ ಪ್ರಮಾಣ ಮಾಡಿ ಮೀಸಲಾತಿ ಕೊಡಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಮುಖ್ಯಮಂತ್ರಿಯಾದ ನಂತರ ಇಲ್ಲಿಯವರೆಗೂ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ, ಯಡಿಯೂರಪ್ಪ ಮಾತು ಕೇಳಿ ನಮಗೆ ಮೋಸ ಮಾಡಿದ್ದಾರೆ’ ಎಂದು ಎಚ್ಚರಿಸಿದರು. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಭವಿಷ್ಯ ನಿರ್ಧರಿಸುವ ಅಂತಿಮ ಹೋರಾಟವಾಗಿದೆ.
Laxmi News 24×7