Breaking News

ಚುನಾವಣೆಗೂ ಮುನ್ನ ಯೋಗಿ ಸರ್ಕಾರ ಭದ್ರತಾ ಪ್ಲ್ಯಾನ್ – ಮಾಯಾವತಿ ಸೇರಿ 44 ನಾಯಕರಿಗೆ ಬುಲೆಟ್‌ಪ್ರೂಫ್ ಜಾಕೆಟ್

Spread the love

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ  ಪ್ರಮುಖ ಭದ್ರತಾ ಕ್ರಮಕ್ಕೆ ಮುಂದಾಗಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಬಹುಜನ ಸಮಾಜ ಪಕ್ಷದ (BSP) ಅಧ್ಯಕ್ಷೆ ಮಾಯಾವತಿ ಸೇರಿದಂತೆ ಸುಮಾರು 44 ಪ್ರಮುಖ ರಾಜಕೀಯ ನಾಯಕರಿಗೆ ಬುಲೆಟ್‌ಪ್ರೂಫ್ ಜಾಕೆಟ್‌ಗಳನ್ನ ಒದಗಿಸಲು ಸಿದ್ಧತೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.

ಮೂಲಗಳ ಪ್ರಕಾರ, ಭದ್ರತಾ ಕೇಂದ್ರ ಕಚೇರಿ ಸುಮಾರು 10 ಲಕ್ಷ ರೂ. ಮೌಲ್ಯದ ಬುಲೆಟ್‌ಪ್ರೂಫ್ ಜಾಕೆಟ್‌ಗಳನ್ನು ಖರೀದಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಎದುರಾಗಬಹುದಾದ ಭದ್ರತಾ ಸವಾಲುಗಳು ಹಾಗೂ ಗುಪ್ತಚರ ಸಂಸ್ಥೆಗಳ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

11 ಸಚಿವರಿಗೂ ಬುಲೆಟ್‌ಪ್ರೂಫ್ ಜಾಕೆಟ್
ಉತ್ತರ ಪ್ರದೇಶ ಸರ್ಕಾರದ 11 ಸಚಿವರಿಗೂ ಬುಲೆಟ್‌ಪ್ರೂಫ್ ಜಾಕೆಟ್‌ಗಳನ್ನ ಒದಗಿಸಲಾಗುತ್ತಿದೆ. ಈ ಪಟ್ಟಿಯಲ್ಲಿ ಸಚಿವರಾದ ಸಂಜಯ್ ನಿಷಾದ್ ಮತ್ತು ನಂದಗೋಪಾಲ್ ನಂದಿ ಸೇರಿದಂತೆ ಹಲವು ಸಚಿವರು ಹಾಗೂ ಪ್ರಮುಖ ರಾಜಕೀಯ ನಾಯಕರು ಸೇರಿದ್ದಾರೆ.

ಈ ಭದ್ರತಾ ವ್ಯವಸ್ಥೆ ಕೇವಲ ಸಚಿವರು ಮತ್ತು ಶಾಸಕರಿಗೆ ಸೀಮಿತವಾಗಿಲ್ಲ. ಭದ್ರತಾ ಅಪಾಯ ಎದುರಿಸುತ್ತಿರುವ ಇತರ ಪ್ರಮುಖ ನಾಯಕರನ್ನೂ ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ