Breaking News

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ

Spread the love

ನವದೆಹಲಿ: ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ  ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರ್ಕಾರ ಸಂಪೂರ್ಣ ಶರಣಾಗಿದೆ ಎಂದು ಆರೋಪಿಸಿದ್ದಾರೆ. 

ಈ ಮೊದಲು ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ವಿಧಿಸಲಾಗುತ್ತಿತ್ತು. ಇದನ್ನು 18%ಗೆ ಏರಿಕೆ ಮಾಡಿದೆ. ಇದನ್ನು ಸಂಭ್ರಮಿಸಲಾಗುತ್ತಿದೆ. ನಾವು ಟೆಕ್ಸ್‌ಟೈಲ್‌ ವಸ್ತುಗಳಿಗೆ 18% ಟ್ಯಾರಿಫ್ ನೀಡುತ್ತಿದ್ದರೆ, ಪಕ್ಕದ ಬಾಂಗ್ಲಾದೇಶದ ಟೆಕ್ಸ್‌ಟೈಲ್ ಉದ್ಯಮಕ್ಕೆ 0% ಟ್ಯಾರಿಫ್ ವಿಧಿಸಿದೆ. ಬಿಗಿಪಟ್ಟು ಹಾಕಿ ಟ್ರಂಪ್ ಮೋದಿ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಣ್ಣಲ್ಲಿ ಭಯ ಕಾಣುತ್ತಿದೆ. ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ಗಳಿಂದ 146 ಬಿಲಿಯನ್ ಡಾಲರ್‌ಗಳಿಗೆ ಏರಿಕೆಯಾಗಲಿದೆ. ಆದರೆ, ಅಮೆರಿಕಕ್ಕೆ ಭಾರತದ ಬಗ್ಗೆ ಯಾವುದೇ ಬದ್ಧತೆ ಇಲ್ಲ. ಆದರೆ ಭಾರತಕ್ಕೆ ಅಮೆರಿಕದ ಬದ್ಧತೆ ಇದೆ. ನಾವು ಮೂರ್ಖರಂತೆ ನಿಂತಿದ್ದೇವೆ ಎಂದು ರಾಹುಲ್ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ