Breaking News

ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ, ಆದ್ರೆ ನಾನು ಫೇಲಾದೆ: ಡೆತ್‌ನೋಟ್‌ ಬರೆದಿಟ್ಟು ನೀಟ್‌ ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಮುಂಬೈ: ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು ಗಳಿಸಿದ ನಂತರ ಆಕೆ ಒತ್ತಡಕ್ಕೊಳಗಾಗಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಶನಿವಾರ ಸಂಜೆ 4.30 ರ ಸುಮಾರಿಗೆ ಆಕೆ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಪೊಲೀಸರಿಗೆ ಮರಾಠಿಯಲ್ಲಿ ಕೈಬರಹದ ಡೆತ್‌ನೋಟ್‌ ಸಿಕ್ಕಿದೆ. ‘ನೀವು ನನಗೆ ತುಂಬಾ ಪ್ರೀತಿ ಕೊಟ್ಟಿದ್ದೀರಿ. ಆದರೆ, ನಿಮ್ಮ ಒಂದೇ ಒಂದು ಆಸೆಯನ್ನು ನಾನು ಪೂರೈಸಲು ಸಾಧ್ಯವಾಗಲಿಲ್ಲ. ಅಮ್ಮ, ನೀವು ಪ್ರತಿಯೊಂದು ಕಷ್ಟದಲ್ಲೂ ನನ್ನನ್ನು ಸ್ನೇಹಿತೆಯಂತೆ ಬೆಂಬಲಿಸಿದ್ದೀರಿ. ದಾದಾ (ಸಹೋದರ), ನೀನು ಕೂಡ ನನಗೆ ತುಂಬಾ ಬೆಂಬಲ ನೀಡಿದ್ದೀಯಾ. ನೀನು ನನ್ನನ್ನು ಅಮ್ಮ ಮತ್ತು ಅಪ್ಪನಿಗಿಂತ ಹೆಚ್ಚಾಗಿ ಪ್ರೀತಿಸಿದ್ದೀಯ. ನನ್ನ ಆತ್ಮಹತ್ಯೆಗೆ ನೀವ್ಯಾರು ಕಾರಣರಲ್ಲ’ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

‘ನಾನು ನೀಟ್ ಓದುತ್ತಿದ್ದಾಗಲೂ, ನೀವು ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ. ನಾನು ವಿಫಲವಾಗಿದ್ದೇನೆ. ನಿಮ್ಮ ಆಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಅಣ್ಣ, ದಯವಿಟ್ಟು ಅಮ್ಮ ಮತ್ತು ಅಪ್ಪನನ್ನು ಚೆನ್ನಾಗಿ ನೋಡಿಕೊ. ಅವರಿಗೆ ಏನೂ ಕೊರತೆಯಾಗಲು ಬಿಡಬೇಡಿ’ ಎಂದು ಡೆತ್‌ನೋಟ್‌ನಲ್ಲಿ ತಿಳಿಸಿದ್ದಾಳೆ. ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರು

Spread the loveಶಿವಮೊಗ್ಗ: ಶರಾವತಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆ ಶರಾವತಿ ನದಿಗೆ ಭಾರೀ ಪ್ರಮಾಣದ ನೀರು ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ