Breaking News

ಐದಕ್ಕೆ 15,000 ಲಾಭ, ಖುಷಿಯಲ್ಲಿ 75 ಲಕ್ಷ ಹೂಡಿಕೆ ಮಾಡಿ ಕೈಸುಟ್ಟುಕೊಂಡ ಯುವಕ!

Spread the love

ದಾವಣಗೆರೆ: ಸೈಬರ್‌ ವಂಚಕರು ಹಾಕಿದ ಗಾಳಕ್ಕೆ ಜಗಳೂರ  ತಾಲೂಕಿನ ಗೌರಿಪುರ ಗ್ರಾಮದ ಯುವಕನೊಬ್ಬ 75 ಲಕ್ಷ ರೂ. ಹಣ ಕಳೆದುಕೊಂಡಿದ್ದಾನೆ.

ಸೈಬರ್‌ ವಂಚಕರು ಯವುವಕನ ಬಳಿ ಹಣ ಹೂಡಿಕೆ ಮಾಡಿದರೆ ಅಧಿಕ ಬಡ್ಡಿ ನೀಡುವುದಾಗಿ ನಂಬಿಸಿದ್ದಾರೆ. ಅದರಂತೆ ‌5,000 ರೂ. ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಬಳಿಕ 15,000 ರೂ. ಲಾಭ ನೀಡಿದ್ದಾರೆ. ಇದರಿಂದ ಖುಷಿಯಾದ ಯುವಕ 75 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದಾನೆ. ಆದರೆ ಯಾವುದೇ ಲಾಭ ಬಂದಿಲ್ಲ. ವಂಚಕರು ಸಂಪರ್ಕಕ್ಕೂ ಸಿಕ್ಕಿಲ್ಲ. ಬಳಿಕ ಆತನಿಗೆ ವಂಚನೆಗೊಳಗಾಗಿರುವುದು ಅರಿವಾಗಿದೆ. ಈ ಸಂಬಂಧ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆಗೊಳಗಾದ ಯುವಕ ಆನ್‌ಲೈನ್ ಗೇಮ್ ವ್ಯಾಮೋಹಿಯಾಗಿದ್ದ. ಸಾಮಾಜಿಕ ಜಾಲತಾಣಗಳ ಜಾಹೀರಾತಿನ ಆಕರ್ಷಣೆಗೆ ಒಳಗಾಗಿ ಹಣ ಹೂಡಿಕೆ ಮಾಡಿದ್ದ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ