Breaking News

ಬೆಳಗಾವಿಯಲ್ಲಿ ತಲವಾರ ಹಿಡಿದು ತಿರುಗಾಡುತ್ತಿದ್ದ ಯುವಕನ ಬಂಧನ

Spread the love

ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಹರಿತವಾದ ತಲವಾರ ಇಟ್ಟುಕೊಂಡು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನನ್ನು ಮಾರ್ಕೆಟ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಬಂಧಿಸಿದ್ದು, ಆತನಿಂದ ಒಂದು ತಲವಾರವನ್ನು ವಶಪಡಿಸಿಕೊಂಡಿದೆ.

ನವೆಂಬರ್ 27ರಂದು ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ವಿಶೇಷ ಪರಿಶೀಲನೆ ನಡೆಸುತ್ತಿತ್ತು.

ಈ ವೇಳೆ ಕೇಂದ್ರ ಬಸ್ ನಿಲ್ದಾಣದ ಸಮೀಪದ ಸ್ವೀಕಾರ ಹೋಟೆಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಹರಿತವಾದ ತಲವಾರವನ್ನು ಅಕ್ರಮವಾಗಿ ಇಟ್ಟುಕೊಂಡು ತಿರುಗಾಡುತ್ತಿದ್ದ ಮಹಮ್ಮದ್ ಬಿಲಾಲ್ ಸರ್ಫರಾಜ್ ಪಠಾಣ (23) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಬೆಳಗಾವಿಯ ಘೀ ಗಲ್ಲಿಯ ನಿವಾಸಿ ಎಂದು ತಿಳಿದುಬಂದಿದೆ.

ಮಾರ್ಕೆಟ್ ಪೊಲೀಸ್ ಠಾಣೆಯ ಪಿಎಸ್‌ಐ ಹುಸೇನ್ ಕೆರೂರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ತಲವಾರ ಸಮೇತ ಬಂಧಿಸಿದ್ದಾರೆ.

ಈ ಸಂಬಂಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 271/2026ರ ಅಡಿಯಲ್ಲಿ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 25(1) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 97ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ಆಶಾ ಕಾರ್ಯಕರ್ತೆಯರ ಜೊತೆ ಯು.ಟಿ. ಖಾದರ್ ಸಭೆ – 2,000 ರೂ. ಹೆಚ್ಚಳದ ಭರವಸೆಗೂ ಮೂಡದ ಒಮ್ಮತ

Spread the loveಬೆಂಗಳೂರು: ಹೋರಾಟ ನಿರತ ಆಶಾ ಕಾರ್ಯಕರ್ತೆಯರ ನಿಯೋಗದ ಜೊತೆ ಆರೋಗ್ಯ ಸಚಿವ ಯು.ಟಿ. ಖಾದರ್  ಸಭೆ ನಡೆಸಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ