ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಪ್ರಸಾದ್ ನಾಯಿಕ (ನಾಯಕಗೌಡರು) ಅವರ ಮದುವೆಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಇತ್ತೀಚೆಗೆ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವರ–ವಧುವರಿಗೆ ಶುಭಾಶಯ ಕೋರಿದರು.
ಈ ವೇಳೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಅಭಿಮಾನಿಗಳೊಂದಿಗೆ ಮಾತನಾಡಿ, ಹೊಸ ದಂಪತಿಗೆ ಸುಖಮಯವಾದ ದಾಂಪತ್ಯ ಜೀವನವಾಗಲಿ ಎಂದು ಆಶಿಸಿದರು.
ಮದುವೆ ಸಮಾರಂಭದಲ್ಲಿ ಹಲವಾರು ಗಣ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಕಾರ್ಯಕ್ರಮವು ಹರ್ಷೋದ್ಗಾರಗಳ ನಡುವೆ ನೆರವೇರಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಆಗಮನದಿಂದ ಸಮಾರಂಭಕ್ಕೆ ಮತ್ತಷ್ಟು ಕಳೆ ಬಂದಿತು.
Laxmi News 24×7