Breaking News

ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಹತ್ಯೆ

Spread the love

ಮಂಡ್ಯ: ಜಗಳ ಬಿಡಿಸಲು ಹೋದ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಮಂಡ್ಯದ  ಮದ್ದೂರು  ಪಟ್ಟಣದ ಕೆಮ್ಮಣ್ಣು ನಾಲೆ ಪ್ರದೇಶದ ಸಿದ್ಧಾರ್ಥ ನಗರದಲ್ಲಿ ನಡೆದಿದೆ.

ಮದ್ದೂರು ಪಟ್ಟಣದ ನಂದನ್ (25) ಕೊಲೆಯಾದ ಯುವಕ. ಹಣದ ವಿಚಾರಕ್ಕೆ ಆರೋಪಿ ರಘು ಹಾಗೂ ಪ್ರಕಾಶ್ ನಡುವೆ ಜಗಳವಾಗಿದ್ದು, ಪ್ರಕಾಶ್ ಜೊತೆ ತೆರಳಿದ್ದ ನಂದನ್ ಇಬ್ಬರ ನಡುವಿನ ಜಗಳ ಬಿಡಿಸಲು ಹೋಗಿದ್ದಾನೆ. ಈ ವೇಳೆ ಆರೋಪಿ ಶಿವರಾಜು ಡ್ರ‍್ಯಾಗರ್‌ನಿಂದ ನಂದನ್ ಮೇಲೆ ಹಲ್ಲೆ ನಡೆಸಿದ್ದಾನೆ. ಧನುಷ್, ಶಿವರಾಜು ಹಾಗೂ ನಿಖಿಲ್‌ನಿಂದ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ತೀವ್ರ ಗಾಯಗೊಂಡ ನಂದನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಮದ್ದೂರು ಪೊಲೀಸರು ಹಾಗೂ ಎಸ್ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್

Spread the loveವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ